ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಕುರಿತು ಮಾರ್ಗಸೂಚಿಗಳ ಬಿಡುಗಡೆ : ಸಚಿವ ಡಾ.ಕೆ.ಸುಧಾಕರ್ ಟ್ವೀಟ್

ಬೆಂಗಳೂರು,ಡಿಸೆಂಬರ್,17,2020(www.justkannada.in) :  ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚರ್ಚ್ ಗಳಲ್ಲಿ ಹಾಗೂ ಹೋಟೆಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಡಿ.30ರಿಂದ ಜನವರಿ 2ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ, ಡಾನ್ಸ್ ಕಾರ್ಯಕ್ರಮಗಳನ್ನು ವಿಶೇಷ ಪಾರ್ಟಿ, ಇತ್ಯಾದಿ ನಿಷೇಧಿಸಿದೆ.  ಆಯ್ದ ರಸ್ತೆ, ಸ್ಥಳಗಳಿಗೆ ಸಂಬಂಧಿಸಿದಂತೆ, ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದು ಸೂಚಿಸಲಾಗಿದೆ.

ಮಾರ್ಗಸೂಚಿಯಂತೆ ಸಾರ್ವಜನಿಕರು ಸರಳವಾಗಿ ಮತ್ತು ಸುರಕ್ಷಿತವಾಗಿ ಹಬ್ಬ ಆಚರಿಸಬೇಕೆಂದು ವಿನಂತಿಸಿದ್ದಾರೆ.  ಚರ್ಚ್ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು.

Release-Guidelines-Christmas-Festival-New Year's-Eve-Minister- Dr K.udhakar

ಕೊರೊನಾ ತಡೆಗಟ್ಟುವ ಉದ್ದೇಶದಿಂದ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ ಎಂದು ತಿಳಿಸಲಾಗಿದೆ.

key words : Release-Guidelines-Christmas-Festival-New Year’s-Eve-Minister- Dr K.udhakar