ಬಿಜೆಪಿ ಶಾಸಕ ನೆಹರು ಓಲೇಕಾರ್ ​​​ಗೆ ರಿಲೀಫ್ ​​: 2 ವರ್ಷ ಜೈಲುಶಿಕ್ಷೆ ವಿಧಿಸಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್.

ಬೆಂಗಳೂರು,ಏಪ್ರಿಲ್,5,2023(www.justkannada.in):  ಬಿಜೆಪಿ ಶಾಸಕ ನೆಹರು ಓಲೇಕಾರ್ ​​​ಗೆ  ರಿಲೀಫ್ ​ ರಿಲೀಫ್ ಸಿಕ್ಕಿದ್ದು,  ನಕಲಿ ಬಿಲ್ ಪ್ರಕರಣದಲ್ಲಿ  2 ವರ್ಷ ಜೈಲುಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

 ಈ ಮೂಲಕ ಅನರ್ಹಗೊಳ್ಳುವ ಭೀತಿಯಿಂದ ನೆಹರು ಓಲೆಕಾರ್​ ಪಾರಾಗಿದ್ದಾರೆ. ದೋಷಿಯಾಗಿಸಿದ ತೀರ್ಪಿಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾ. ಕೆ. ನಟರಾಜನ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೆ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ವಿರುದ್ಧ ಸ್ವಜನ ಪಕ್ಷಪಾತ ಆರೋಪಿಸಿತ್ತು. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಜಾಮೀನು ಮಂಜೂರು ಮಾಡಲಾಗಿತ್ತು.

Key words: Relief – BJP- MLA Nehru Olekar- High Court- stayed – 2 years -imprisonment