Monday, August 10, 2026

BDA Apartments

Home Front Page ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್.

ಬೆಂಗಳೂರು,ಜುಲೈ,15,2023(www.justkannada.in): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ.  ಬಿಲ್ ಪಾವತಿಗೆ ಕಮಿಷನ್ ಕೇಳಿದ ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು.

ವರದಿ ಪ್ರಶ್ನಿಸಿ ಸಂತೋಷ್ ಪಾಟೀಲ್  ಸಹೋದರ ಅರ್ಜಿ ಸಲ್ಲಿಸಿದ್ದರು. ಪ್ರಶಾಂತ್ ಪಾಟೀಲ್ ತಕರಾರು ಅರ್ಜಿ ಸಲ್ಲಿಸಿದ್ದರು ವಾದ ಪ್ರತಿವಾದ  ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.

Key words: Relief – former minister-KS Eshwarappa – contractor -Santosh -suicide case.