ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪ್ಯಾಕೇಜ್ ?

ಬೆಂಗಳೂರು, ಆಗಸ್ಟ್ 13, 2023 (www.justkannada.in): ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪ್ಯಾಕೇಜ್ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.

ಶಕ್ತಿ ಯೋಜನೆಯಿಂದ ಖಾಸಗಿ ಬಸ್, ಆಟೋಗಳಿಗೆ ಹೊಡೆತ ಬಿದ್ದಿದೆ. ಹೀಗಾಗಿ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಸಿಲುಕಿರುವಂತ ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರ ಪರಿಹಾರ ಪ್ಯಾಕೇಜ್ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಖಾಸಗಿ ಬಸ್, ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಆಗುತ್ತಿರುವ ನಷ್ಟ ತುಂಬಿ ಕೊಡಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಪರಿಹಾರ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ.

ಸಿಎಂ ಸಿದ್ಧರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆಗೆ ಪರಿಹಾರ ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಿದ್ದಾರೆ. ಅದರಲ್ಲೂ ಸಾರಿಗೆ ಕ್ಷೇತ್ರಕ್ಕೆ ಆಗಿರುವ ನಷ್ಟದ ವರದಿ ನೀಡುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.