ಸಂವಿಧಾನಕ್ಕಿಂತ ಧರ್ಮ ದೊಡ್ಡದಲ್ಲ ಎಂಬುದು ಸಾಬೀತು: ಹಿಜಾಬ್ ವಿವಾದ ಇಲ್ಲಿಗೆ ಬಿಡಿ- ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು,ಮಾರ್ಚ್,15,2022(www.justkannada.in):  ಸಮವಸ್ತ್ರ ನೀತಿಯನ್ನ ಹೈ ಕೋರ್ಟ್ ಎತ್ತಿಹಿಡಿದಿದೆ. ಸಂವಿಧಾನಕ್ಕಿಂತ ಧರ್ಮ ದೊಡ್ಡದಲ್ಲ ಎಂಬುದು ಸಾಬೀತಾಗಿದೆ.  ಹಿಜಾಬ್ ವಿಷಯವನ್ನ ಇಲ್ಲಿಗೆ ಬಿಡಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಹೈಕೋರ್ಟ್ ತೀರ್ಪಿನ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ಸಮವಸ್ತ್ರ ನೀತಿಯನ್ನು ಕೋರ್ಟ್ ಎತ್ತಿ ಹಿಡಿದಿದೆ. ಸಂವಿಧಾನವನ್ನು ಗೌರವಿಸುವವರು, ಇಂದಿನ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಿ. ಹಿಜಾಬ್ ವಿವಾದವನ್ನು ಇಲ್ಲಿಗೆ ಬಿಡಬೇಕು ಎಂದು ಹೇಳಿದರು.

ಈ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಎಲ್ಲ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳಿಸಲು ಕ್ರಮಕೈಗೊಳ್ಳಬೇಕು. ಗೊಂದಲ ಬಿಟ್ಟು ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಬರುವಂತೆ ಕರೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

Key words: Religion – Constitution-hijab-BSY