Sunday, August 9, 2026

BDA Apartments

Home Front Page ಕಳಪೆ ಸಾಧನೆ ಮಾಡಿರುವ ಸಚಿವರನ್ನ ತೆಗೆದು ಹೊಸಬರಿಗೆ ಅವಕಾಶ ನೀಡಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

ಕಳಪೆ ಸಾಧನೆ ಮಾಡಿರುವ ಸಚಿವರನ್ನ ತೆಗೆದು ಹೊಸಬರಿಗೆ ಅವಕಾಶ ನೀಡಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ…

ವಿಜಯಪುರ,ಫೆ.3,2020(www.justkannada.in): ಸಚಿವರ ಮೌಲ್ಯಮಾಪನ ನಡೆಸಬೇಕು.  ಕಳಪೆ ಸಾಧನೆ ಮಾಡಿರುವ ಸಚಿವರನ್ನು ತೆಗೆದುಹಾಕಿ ಹೊಸ ಶಾಸಕರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​  ಆಗ್ರಹಿಸಿದರು.

ವಿಜಯಪುರದಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ಸುಸ್ಥಿರ ಸರ್ಕಾರಕ್ಕಾಗಿ ಸ್ಥಾನಮಾನ ಪಡೆದವರು ತ್ಯಾಗ ಮಾಡಬೇಕು. ಸಚಿವರ ಮೌಲ್ಯಮಾಪನ ನಡೆಸಬೇಕೆಂದು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದೇನೆ. ಕೆಲ ಸಚಿವರು ವಿಧಾನಸೌಧ ಹಾಗೂ ವಿಕಾಸಸೌಧದತ್ತ ಸುಳಿಯಲ್ಲ. ಅವರನ್ನು ಶಾಸಕರಾದ ನಾವು ಹುಡುಕಬೇಕಾಗಿದೆ. ಅವರ ಪಿಎಗಳೂ ಸಹ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಳಪೆ ಸಾಧನೆ ಮಾಡಿದ ಸಚಿವರನ್ನು ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಸಚಿವ ಸ್ಥಾನ ಕಳೆದುಕೊಂಡರೆ ಅವರೇನು ಬಂಡಾಯ ಏಳಲ್ಲ. ಬಂಡಾಯ ಎದ್ದು ಚುನಾವಣೆಗೆ ಹೋದರೂ ಅವರು ಮರು ಆಯ್ಕೆಯಾಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

Key words: Remove – poorly performing -minister –MLA- Basanagowda Patil Yatnal