ಉದ್ಯಮಿಯೊಂದಿಗೆ ಶೀಘ್ರ ಹಸೆಮಣೆಯೇರಲಿದ್ದಾರೆ ನಟಿ ಭಾಮ

ಬೆಂಗಳೂರು, ಜನವರಿ 23, 2019 (www.justkannada.in): ರಾಕಿಂಗ್ ಸ್ಟಾರ್ ಯಶ್ ಜತೆಗೆ ‘ಮೊದಲ ಸಲ’ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟ ಮಲಯಾಳಿ ನಟಿ ಭಾಮ ಶೀಘ್ರದಲ್ಲೇ ಹಸೆಮಣೆಯೇರಲಿದ್ದಾರೆ.

ಮಲಯಾಳಂ, ಕನ್ನಡ, ತಮಿಳು ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿರುವ ಭಾಮ ಉದ್ಯಮಿ ಅರುಣ್ ಎಂಬವರ ಜತೆ ಸಪ್ತಪದಿ ತುಳಿಯಲಿದ್ದಾರೆ. ಇವರಿಬ್ಬರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ.

ಇದೇ ತಿಂಗಳ ಅಂತ್ಯಕ್ಕೆ ಇವರಿಬ್ಬರೂ ಕೊಚ್ಚಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ. ಆಪ್ತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ಭಾಮ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಪ್ರಕಟಿಸಿದ್ದಾರೆ.