45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಉಚಿತ ಲಸಿಕೆ ಮುಂದುವರಿಯಲಿದೆ ಎಂದ ಮೋದಿ

ಬೆಂಗಳೂರು, ಏಪ್ರಿಲ್ 25, 2021 (www.justkannada.in): 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರದಿಂದ ಉಚಿತವಾಗಿ ಕೊರೊನಾ ಲಸಿಕೆ ಯೋಜನೆ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಮನ್ ಕಿ ಬಾತ್’ ನಲ್ಲಿ ಮಾತನಾಡಿದ ಪ್ರಧಾನಿ, ಕೊರೊನಾ ವೈರಸ್ 1 ನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಇದು ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನು 45 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಮುಂದುವರಿಯಲಿದೆ ಎಂದು ಮೋದಿ ಹೇಳಿದರು.

ಕೊರೊನಾ ಲಸಿಕೆ ಕುರಿತಂತೆ ಊಹಾಪೋಹಗಳನ್ನು ನಂಬಬೇಡಿ, ವಿಶ್ವಾಸಾರ್ಹ ಸುದ್ದಿಗಳನ್ನು ಮಾತ್ರ ನಂಬಿ. ಎಲ್ಲರಿಗೂ ಲಸಿಕೆ ಮಹತ್ವದ ಬಗ್ಗೆ ತಿಳಿಯುತ್ತಿದೆ ಎಂದು ಮೋದಿ ತಿಳಿಸಿದರು.