Sunday, August 23, 2026

BDA Apartments

Home Front Page ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 19, 2020 (www.justkannada.in): ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತಮ ಮಳೆ: ಕೊಡಗು ಜಿಲ್ಲೆಯ ಭಾಗಮಂಡಲ ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಸೋಮವಾರ ಭಾರಿ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಸುಳ್ಯ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದೆ.