Sunday, August 9, 2026

BDA Apartments

Home Cinema ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನು ನೆನಪು

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನು ನೆನಪು

ಬೆಂಗಳೂರು, ಫೆಬ್ರವರಿ 06,2022 (www.justkannada.in): ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇಂದು ನಿಧನರಾಗಿದ್ದಾರೆ.

ತಮ್ಮ 92 ವರ್ಷದ ಲತಾ ಮಂಗೇಶ್ಕರ್ ಅವರು, ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಜನವರಿ 8 ರಿಂದ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಚಿತ್ರರಂಗ, ರಾಜಕೀಯ ರಂಗದ ಗಣ್ಯರು, ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.