ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ: ಪೊಲೀಸ್ ಠಾಣೆ ಸುತ್ತ 144 ಸೆಕ್ಷನ್ ಜಾರಿ.

ಬೆಂಗಳೂರು,ಜೂನ್,13,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ 13 ಮಂದಿಯನ್ನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಠಾಣೆಯ ಸುತ್ತಮುತ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 5 ದಿನಗಳ ಕಾಲ ಜೂನ್ 17ರವರೆಗೆ  144 ಸೆಕ್ಷನ್ ಜಾರಿ ಮಾಡಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತ ಪೊಲೀಸರು ಶಾಮಿಯಾನ ಹಾಕಿದ್ದಾರೆ. ಠಾಣೆಯಲ್ಲಿನ ಚಟುವಟಿಕೆ ಕಾಣದಂತೆ ಶಾಮಿಯಾನ ಹಾಕಿದ್ದಾರೆ ಎನ್ನಲಾಗಿದೆ.

Key words:  Renukaswamy , murder, case, 144 Section