Wednesday, October 28, 2026

Dasara Wishes

Happy Dasara
Home Crime ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ವೇಳೆ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ವೇಳೆ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ವೇಳೆ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ಬೆಂಗಳೂರು,ಅಕ್ಟೋಬರ್,28,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ವೇಳೆ ಪ್ರತ್ಯಕ್ಷ ಸಾಕ್ಷಿ ಪುನೀತ್ ಉಲ್ಟಾ ಹೊಡೆದಿದ್ದಾನೆ ಎನ್ನಲಾಗಿದೆ.

ನಗರದ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆಯುತ್ತಿರುವ ಸಾಕ್ಷಿ ವಿಚಾರಣೆ ವೇಳೆ ಪ್ರತ್ಯಕ್ಷ ಸಾಕ್ಷಿ ಪುನೀತ್ ಕೋರ್ಟ್‌ನಲ್ಲಿ ಉಲ್ಟಾ ಹೊಡೆದಿದ್ದು  ಶೆಡ್ ಬಳಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಯಾವುದೇ ಆರೋಪಿಗಳು ಬಂದಿರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.Renukaswamy RENUKA

ಕೋರ್ಟ್‌ ನಲ್ಲಿ ಹಾಜರಿದ್ದ ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಯಾವುದೇ ಆರೋಪಿಗಳನ್ನು ತಾವು ಘಟನಾ ಸ್ಥಳದಲ್ಲಿ ನೋಡಿರಲಿಲ್ಲ ಎಂದು  ತಿಳಿಸಿದ್ದಾನೆ. ಎನ್ನಲಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ವೇಳೆ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ಈ ಮುಂಚೆ ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164ರ ಅಡಿಯಲ್ಲಿ ನೀಡಿದ್ದ ಹೇಳಿಕೆಯಿಂದ ಪುನೀತ್ ಸಂಪೂರ್ಣವಾಗಿ ಹಿಂದೆ ಸರಿದಿದ್ದು,  ತನ್ನ ಹಿಂದಿನ ಹೇಳಿಕೆಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ಆತನನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸಲಾಗಿದೆ. ಸಾಕ್ಷಿಯ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕೋರ್ಟ್ , ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.murder case jk02_new jk02 new

 

English Summary
Title

: Renukaswamy Murder Case: Eyewitness Puneeth Turns Hostile, Denies Actor Darshan's Presence

Short Description
In a major twist in the Renukaswamy murder case, key eyewitness Puneeth has turned hostile. Testifying before the Bengaluru Sessions Court, Puneeth completely retracted his previous Section 164 statement. He claimed actor Darshan, Pavithra Gowda, and other co-accused were not present at the shed where the crime occurred, denying seeing them at the scene. This dramatic turnaround follows a non-bailable warrant issued against Puneeth just a day prior for missing a scheduled hearing. As the alleged owner of the Scorpio vehicle used to transport the victim's body, Puneeth's sudden hostility delivers a significant blow to the prosecution's case.
Keywords
Renukaswamy, murder case, Eyewitness, Puneeth, turns