ಬೆಂಗಳೂರು,ಆಗಸ್ಟ್,12,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು ವಿಚಾರಣೆಯನ್ನ 64ನೇ ಸೆಷನ್ಸ್ ಕೋರ್ಟ್ ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಕೊಲೆ ಕೇಸಲ್ಲಿ ಚಾರ್ಜ್ ಪ್ರೇಮ್ ಹಿನ್ನೆಲೆ ಇಂದು ಎಲ್ಲಾ ಆರೋಪಿಗಳು ಕೋರ್ಟ್ ಹಾಜರಾಗಿದ್ದರು ಎನ್ನಲಾಗಿದೆ.
ಕಳೆದ ಬಾರಿಯ ವಿಚಾರಣೆ ವೇಳೆ ಕೆಲವು ಆರೋಪಿಗಳು ಗೈರಾಗಿದ್ದರು. ಇದೇ ವೇಳೆ 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದರು.
ಇನ್ನು ನಟ ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಈಗಾಗಲೇ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ. ಇತ್ತ 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದಾರೆ.
Key words: Renukaswamy, murder case, Hearing, adjourned , September 9