ರೇಣುಕಾಸ್ವಾಮಿ ಕೊಲೆ ಪ್ರಕರಣ:  ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನ ಕರೆತಂದು ಸ್ಥಳ ಮಹಜರು.  

ಬೆಂಗಳೂರು,ಜೂನ್,12,2024 (www.justkannada.in):  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಆರೋಪಿ ನಟ ದರ್ಶನ್  ಸೇರಿ ಎಲ್ಲಾ ಆರೋಪಿಗಳನ್ನ ಹತ್ಯೆ ನಡೆದ ಸ್ಥಳಕ್ಕೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ರೇಣುಕಾಸ್ವಾಮಿ ಹತ್ಯೆಯಾದ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ಎಲ್ಲಾ ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಅಲ್ಲದೆ ಸ್ಥಳಮಹಜರನ್ನ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಈಗಾಗಲೇ ದರ್ಶನ್ ಪವಿತ್ರಗೌಡ ಅವರನ್ನು ಹೊರತುಪಡಿಸಿ  ಪ್ರಕರಣದ ಎಲ್ಲಾ ಆರೋಪಿಗಳನ್ನು ಕರೆ ತಂದು  ಶವ ಎಸೆಯಲಾಗಿದ್ದ ಸ್ಥಳದಲ್ಲಿ ಮಹಜರು ನಡೆಸಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಬಂದಿದ್ದು ಸ್ಥಳ ಮಹಜರು  ನಡೆಸುತ್ತಿದ್ದಾರೆ.

Key words: Renukaswamy, murder, case, actor, Darshan