Sunday, August 9, 2026

BDA Apartments

Home Cinema ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು,ಸೆಪ್ಟಂಬರ್,4,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ದ ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದ್ದಾರೆ.

ಪ್ರಕರಣ ಕುರಿತು ತನಿಖೆ ನಡೆಸಿದ ಪೊಲೀಸರು ಇದೀಗ ಇಂದು ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ 3,991 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಚಂದನ್ ನೇತೃತ್ವದಲ್ಲಿ ಎಸ್ ಪಿಪಿ ಮೂಲಕ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಚಾರ್ಜ್ ಶೀಟ್ ನಲ್ಲಿ 250 ಸಾಕ್ಷಿಗಳ ಬಗ್ಗೆ ಉಲ್ಲೇಖಿಸಲಾಗಿದೆ.  ನಟ ದರ್ಶನ್ ಎ2, ಪವಿತ್ರಗೌಡ ಎ1 ಎಂದು ಚಾರ್ಚ್ ಶೀಟ್ ನಲ್ಲಿ  ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ.

Key words: Renukaswamy, murder, case: Charge sheet, actor, Darshan