Sunday, August 2, 2026

BDA Apartments

Home Crime ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು,ಸೆಪ್ಟಂಬರ್,23,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಜಾಮೀನು ಮಂಜೂರಾಗಿದೆ.

ಎ15 ಕಾರ್ತಿಕ್, ಎ 16 ಕೇಶವಮೂರ್ತಿ, ಎ17 ನಿಖಿಲ್ ನಾಯಕ್ ಗೆ ಜಾಮೀನು ಮಂಜೂರಾಗಿದೆ.  ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದರೇ ಎ16 ಕೇಶವ್ ಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಮೂವರು ಸಾಕ್ಷ್ಯ ನಾಶ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದರು. ಇದೀಗ ಮೂವರಿಗೆ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಜಾಮೀನು ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

Key words: Renukaswamy, murder case, granted, bail, Three accused