ರೇಣುಕಾಸ್ವಾಮಿ ಕೊಲೆ ಕೇಸ್: ಯಾರ ಮುಲಾಜಿಲ್ಲದೆ ವರದಿ ಬಂದ ಬಳಿಕ ಕಾನೂನು ಕ್ರಮ- ಗೃಹ ಸಚಿವ ಡಾ. ಜಿ.ಪರಮೇಶ್ವರ್.

ಬೆಂಗಳೂರು,ಜೂನ್ ,17,2024 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಬಂದ ಬಳಿಕ ಯಾರ ಮುಲಾಜಿಲ್ಲದೇ, ಯಾರ ಒತ್ತಡಕ್ಕೆ ಮಣಿಯದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಾಗಲೇ ಸಮರ್ಥ  ಅಧಿಕಾರಿಗಳ ನೇಮಕ ಆಗಿದೆ . ಸಿಎಂ ಮತ್ತು ನಾವು ಹೇಳಿದ್ದೇವೆ. ವರದಿ ಬಂದ ಬಳಿಕ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.  ಯಾರನ್ನೂ ರಕ್ಷಿಸಲ್ಲ ಯಾರ ಒತ್ತಡಕ್ಕೂ ಮಣಿಯಲ್ಲ. ಯಾರ ಮುಲಾಜು ಇಲ್ಲದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Key words: Renukaswamy, murder, case, Minister, Parameshwar