ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ17 ಆರೋಪಿಗಳ ಬಂಧನ: ಕೂಲಂಕಷ ತನಿಖೆ- ಪೊಲೀಸ್ ಆಯುಕ್ತ ಬಿ.ದಯಾನಂದ್.

ಬೆಂಗಳೂರು, ಜೂನ್​ 18,2024 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಕೂಲಂಕಷವಾದ ತನಿಖೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್,  ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ ಎಂದರು.

ವ್ಯಕ್ತಿ ಕೊಲೆ ಮಾಡಿರುವುದು ಹೀನ ಅತ್ಯಂತ ಹೇಯ ಕೃತ್ಯ .  ಮೃತ ರೇಣುಕಾಸ್ವಾಮಿ  ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಬಿ.ದಯಾನಂದ್ ತಿಳಿಸಿದರು.

Key words: Renukaswamy, murder, case,  Police Commissioner, B. Dayanand