ವರುಣಾ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಂಗಳೂರು, ಜೂನ್ ,13,2023(www.justkannada.in):  ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್  ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ  ಕಲಾವಿದರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿತು.

ಬಜೆಟ್ ಮುಗಿದ ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ  ಚಿತ್ರನಗರಿ ನಿರ್ಮಾಣಕ್ಕಾಗಿ ಮತ್ತೊಂದು ಸುತ್ತಿನ‌ ಸುದೀರ್ಘ ಚರ್ಚೆ ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ಈ  ಸಂದರ್ಭದಲ್ಲಿ ಭರವಸೆ ನೀಡಿದರು.  ನಿಯೋಗವು ಸಲ್ಲಿಸಿದ ಇತರೆ ಮನವಿಗಳ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.

ಚಲಚಿತ್ರ ನಿರ್ದೇಶಕರಾದ  ಗಿರೀಶ್ ಕಾಸರವಳ್ಳಿ, ಟಿ ಎನ್.ಸೀತಾರಾಮ್,  ಲಿಂಗದೇವರು,  ನಂಜುಂಡೇಗೌಡ, ಹಿರಿಯ ನಟ ಶ್ರೀನಿವಾಸ ಮೂರ್ತಿ,  ಕಲಾವಿದೆ ವಿಜಯಲಕ್ಷ್ಮಿ ಸಿಂಗ್,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ  ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

Key words: Request – Chief Minister –Siddaramaiah- build -Chitra Nagari – Varuna Constituency

ENGLISH SUMMARY..

Artistes appeal to Chief Minister Siddaramaiah to build Film City in Varuna Constituency
Bengaluru, June 13- Renowned film Director and producer S.V. Ranendersingh Babu led delegation of National Film Awardees met Chief Minister here today and discussed about the construction of Film City in Mysuru and other issues.
On this occasion, Chief Minister assured to hold another round of detailed discussion about construction Film City in Varuna Constituency in Mysuru after State Budget. He also assured to consider other requests of the delegation.
Renowned film director Girish Kasaravalli, T.N. Seetharama, Lingadevaru, Nanjundegowda, Senior actor Shrinivas Murthy, Actress Vijayalakshmi Singh, Commissioner of Department of Information and Public Relations, Hemanth Nimbalker were present.