Wednesday, July 29, 2026

BDA Apartments

Home Front Page “ಸಂಶೋಧನಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ” : ವಿದ್ಯಾರ್ಥಿಗಳಿಂದ ಪ್ರತಿಭಟನೆ

“ಸಂಶೋಧನಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ” : ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು,ಜನವರಿ,13,2021(www.justkannada.in) : ಸಂಶೋಧನಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ವಿವಿ ಸಂಶೋಧಕರ ಸಂಘದ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-mysore

ಕ್ರಾಫರ್ಡ್ ಭವನದ ಗೇಟ್  ಎದುರು ಜಮಾವಣೆಗೊಂಡ ಪ್ರತಿಭಟನಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಮಂಗಳೂರು, ತುಮಕೂರು ವಿವಿಗಳಂತೆ ಸಂಶೋಧನಾ ವಿದ್ಯಾರ್ಥಿಗಳಿಗೆ ಮೈಸೂರುವಿವಿಯು ಲ್ಯಾಪ್ ಟಾಪ್ ವಿತರಣೆ ಮಾಡಬೇಕು. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿವೇತನ ನೀಡಬೇಕು. ಸೆಂಟ್ರಲ್ ಕಿಚನ್ ವ್ಯವಸ್ಥೆ ಕೈಬಿಟ್ಟು ಈಗಿರುವ ಊಟದ ವ್ಯವಸ್ಥೆಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಪದವಿ, ಸ್ನಾತಕ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಸೇರಿ ಮೂಲಭೂತ ಸೌಕರ್ಯ ಒದಗಿಸಬೇಕು. ಸಂಶೋಧನಾ ವಿದ್ಯಾರ್ಥಿಗಳಿಗೂ ಊಟದ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.Research,students,Laptop,Distribute,Protest,students

ಮಾಹಿತಿ ತಿಳಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಅವರು ವಿದ್ಯಾರ್ಥಿಗಳ ಬೇಡಿಕೆ ಆಲಿಸಿ, ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳಲಾಗುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದರು.

key words : Research-students-Laptop-Distribute-Protest-students