ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ: ಅನಿರ್ಧಿಷ್ಟಾವಧಿ ಧರಣಿ ಕೈಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ.

0
3

ಬೆಂಗಳೂರು,ಅಕ್ಟೋಬರ್,24,2022(www.justkannada.in) : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ವಾಲ್ಮಿಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಳಿಸಿದರು.

ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು 257 ದಿನಗಳಿಂದ  ಅಂದರೇ ಫೇ.10ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡದ್ದರು.

ಎಸ್.ಸಿ ಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಸಹಿ ಹಾಕಿದ್ದಾರೆ.

ಹೀಗಾಗಿ ನಗರದ ಫ್ರೀಡಂಪಾರ್ಕ್ ನಲ್ಲಿ  ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ಧರಣಿ ಅಂತ್ಯಗೊಳಿಸಿದ್ದು ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಸುಗ್ರಿವಾಜ್ಞೆ ಪ್ರತಿ ಹಸ್ತಾಂತರ ಮಾಡಿ ಸಿಹಿ ತಿನ್ನಿಸಿದರು.

Key words: reservation -increase: Prasannanandpuri Shri- withdraw-protest