ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಎಸ್ ಸಿ ಒಳಮೀಸಲಾತಿ ಜಾರಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಭೋವಿ ಕೊರಚ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ರಸ್ತೆ ಮಧ್ಯೆದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಆರ್ ಸರ್ಕಲ್ ಕಡೆ ತೆರಳುವ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು , ಬಸ್ ಕಾರುಗಳನ್ನ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ. ಇನ್ನೊಂದೆಡೆ ಪ್ರತಿಭಟನೆ ವೇಳೆ ಸ್ಥಳದಲ್ಲಿ ಯುವಕರು ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
Key words: condemns, reservation, injustice, protest