ಚುನಾವಣೆ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು? ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಟಾಂಗ್.

ಬೆಂಗಳೂರು,ಮೇ,25,2023(www.justkannada.in): ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಟೀಕಿಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?

ಸೋಲಿನ ಹೊಣೆ ಯಾರದ್ದು ಬಿಜೆಪಿ? ಅಮಿತ್  ಶಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು? ಎಂದು ಬಿಜೆಪಿ ನಾಯಕರ ಕಾಲೆಳೆದಿದೆ ಕಾಂಗ್ರೆಸ್.

ಗ್ಯಾರಂಟಿ ಯೋಜನೆ ಜಾರಿ ಕುರಿತು ಟೀಕಿಸಿದ  ಬಿಜೆಪಿಗೆ  ಮತ್ತೊಂದು ಟ್ವಿಟ್ ಮಾಡಿ ತಿರುಗೇಟು ನೀಡಿರುವ ಕಾಂಗ್ರೆಸ್, ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಲೇವಡಿ ಮಾಡಿದೆ.

Key words: resign – responsibility – election –defeat- Congress -Tong – BJP.