ಸಿಎಂ ರಾಜೀನಾಮೆಗೆ ಆಗ್ರಹಿಸಿ ಜು.3ರಂದು ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜೂನ್,29,2024 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ  ಒತ್ತಾಯಿಸಿ ಜುಲೈ 3ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ. ಸಿದ್ದರಾಮಯ್ಯ ಜೊತೆಗೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಸಹ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಎಂಗೆ ಗೊತ್ತಿಲ್ಲದೆ ಅಕ್ರಮ ನಡೆಯಲು ಸಾಧ್ಯವಿಲ್ಲ. ನೂರಾರು ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ ಆರೋಪಿ ಸತ್ಯನಾರಾಯಣ್ ಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಚಿವ ನಾಗೇಂದ್ರರನ್ನ ತನಿಖೆಗೆ ಒಳಪಡಿಸಿಲ್ಲ ಎಂದರು ಬಿವೈ ವಿಜಯೇಂದ್ರ ಕಿಡಿಕಾರಿದರು.

Key words:  resignation, CM, siege, residence, BY Vijayendra