Sunday, August 2, 2026

BDA Apartments

Home Front Page ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರ: ಮೈಸೂರಿನಲ್ಲಿ ಡಿ.ವಿ ಸದಾನಂದಗೌಡರು ಪ್ರತಿಕ್ರಿಯಿಸಿದ್ದು ಹೀಗೆ.

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರ: ಮೈಸೂರಿನಲ್ಲಿ ಡಿ.ವಿ ಸದಾನಂದಗೌಡರು ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರು,ಜುಲೈ,13,2021(www.justkannada.in): ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು, ಇದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ ಎಂದಿದ್ದಾರೆ.jk

 

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಮಾಜಿ ಸಚಿವ ಸದಾನಂದಗೌಡ, ರಾಜೀನಾಮೆ ವಿಚಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಕೆಲ ರಾಜ್ಯಗಳ ಮುಂದಿನ ಚುನಾವಣೆಯ ಸಂಘಟನಾ ದೃಷ್ಟಿಯಿಂದ ರಾಜಿನಾಮೆ ಕೇಳಿದರು. ತಕ್ಷಣ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ನೀಡಿರೋದು ಸಂಘಟನೆಗೆ ಸಂಭಂದಪಟ್ಟ ವಿಚಾರ ಎಂದರು.

ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿದೆ. ಮೂರ್ನಾಲ್ಕು ರಾಜ್ಯದಲ್ಲಿದ್ದ ಬಿಜೆಪಿ ಈಗ ಹದಿಮೂರು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಮೋದಿ ಜಾಗತಿಕವಾಗಿ ಬೆಳೆದಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ಸದಾನಂದಗೌಡ ಹೇಳಿದರು.

Key words: Resignation – Union Minister-position-DV Sadananda Gowda -Mysore.