Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಕ್ರಿಕೆಟ್: ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ !

ಕ್ರಿಕೆಟ್: ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ !

ಸೌತಾಂಪ್ಟನ್, ಜೂನ್ 24, 2019 (www.justkannada.in): ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಹಾಗೂ ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ಟೀಂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ವೇಗದ ಬೌಲರ್ ಜಸ್ ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮೆರಿಕ ಹಾಗೂ ಕೆರಿಬಿಯನ್ ಆತಿಥ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಆಗಸ್ಟ್ 3 ರಂದು ಆರಂಭವಾಗಲಿದೆ. ವಿರಾಟ್ ಕೊಹ್ಲಿ ಟಿ20 ಹಾಗೂ ಏಕದಿನ ಸರಣಿ ಬಳಿಕ ಟೆಸ್ಟ್ ಸರಣಿಗೆ ವಾಪಸಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಿರಾಟ್ ಕೊಹ್ಲಿ ಕಳೆದ ಆಸ್ಟ್ರೇಲಿಯಾ ಸರಣಿಯಿಂದ ಆಡುತ್ತಿದ್ದರೆ, ಬುಮ್ರಾರ ವರ್ಕ್ ಲೋಡ್ ಮ್ಯಾನೇಜ್ ಮೆಂಟ್ ಮಾಡುವ ಕಾರಣಕ್ಕಾಗಿ ವಿಶ್ರಾಂತಿ ನೀಡಲಿದ್ದೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.