ಇಂದಿನಿಂದ ಮೈಸೂರಿನ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧ….

ಮೈಸೂರು,ಜೂ,24,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.restriction-entry-devotees-mysore-suttur-math

ಮೈಸೂರಿನಲ್ಲಿ ನಿನ್ನೆ ಮತ್ತೆ 21 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಸಕ್ರಿಯ ಪ್ರಕರಣ 79 ಕ್ಕೆ ಏರಿಕೆಯಾಗಿದೆ. ಇತ್ತೀಚೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮೈಸೂರಿನ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶವನ್ನ ನಿರ್ಬಂಧಿಸಲಾಗಿದೆ. ಭಕ್ತರ ಹಿತದೃಷ್ಠಿಯಿಂದ  ಇಂದಿನಿಂದ ಮಠಕ್ಕೆ ಪ್ರವೇಶವಿಲ್ಲ ಎಂದು ಮಠದ ವ್ಯವಸ್ಥಾಪಕ ಶ್ರೀ ಶಿವಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

Key words: restriction -entry -devotees – Mysore-suttur math