Saturday, August 22, 2026

BDA Apartments

Home Front Page ಬೆಳಗಾವಿ ಸುವರ್ಣಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ.

ಬೆಳಗಾವಿ ಸುವರ್ಣಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ.

ಬೆಳಗಾವಿ,ಡಿಸೆಂಬರ್,22,2021(www.justkannada.in): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರ ನಿನ್ನೆ ವಿಧಾನಸಭೆಯಲ್ಲಿ ವಿಧೇಯಕವನ್ನ ಮಂಡಿಸಿದೆ. ಈ ಮಧ್ಯೆ ಈ ಕಾಯ್ದೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಮಾಧ್ಯಮ ಪ್ರತಿನಿಧಿಗಳನ್ನ ಒಳಗೆ ಬಿಡದಂತೆ ಸೂಚಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದಾರೆ. ಯಾವುದೇ ಗೇಟ್ ನಿಂದಲೂ ಮಾಧ್ಯಮದವರಿಗೆ ಪ್ರವೇಶವಿಲ್ಲ.

ನಿನ್ನೆ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಿದ್ದು ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದರು. ಇಂದು ಈ ಕಾಯ್ದೆ ಮೇಲೆ ಚರ್ಚೆಯಾಗಿಲಿದ್ದು ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಕ್ಯಾಮರಾಗಳಿಗೆ ನಿಷೇಧ ಹೇರಲಾಗಿದೆ.

Key words: Restriction –media- access – Belgaum -suvarnasoudha