Saturday, September 19, 2026

BDA Apartments

ನಾಳೆ (ಜೂ.20) 12 ಗಂಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ BDA...
Home Front Page ನಾಳೆ (ಜೂ.20) 12 ಗಂಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ನಾಳೆ (ಜೂ.20) 12 ಗಂಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು, ಜೂನ್ 19, 2022 (www.justkannada.in): ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

ಸೋಮವಾರ 12 ಗಂಟೆಯಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಪ್ರಧಾನಿ ಮೋದಿ ಅವರು ಸೋಮವಾರ ರಾತ್ರಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಮಾಡಲಿದ್ದಾರೆ. ಭದ್ರತೆ ದೃಷ್ಟಿಯಿಂದ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಜೂನ್ 20ರ ಮಧ್ಯಾಹ್ನ12 ಗಂಟೆ ನಂತರ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೂನ್ 21ರಂದು ಎಂದಿನಂತೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.