ಸದ್ಯಕ್ಕೆ ಅಮೆರಿಕಾಕ್ಕೆ ಹೋಗಲು ನಿರ್ಬಂಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್:, ಏಪ್ರಿಲ್ 21, 2020 (www.justkannada.in): ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಎಲ್ಲಾ ದೇಶಗಳಿಂದ ವಲಸೆ ಹೋಗುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕಣ್ಣಿಗೆ ಕಾಣದಿರುವ ಶತ್ರುಗಳ ದಾಳಿಯ ಹಿನ್ನೆಲೆಯಲ್ಲಿ ಮತ್ತು ಅಮೆರಿಕಾದ ಪ್ರಜೆಗಳ ಉದ್ಯೋಗಗಳನ್ನು ಕಾಪಾಡುವ ಅಗತ್ಯವಿರುವುದರಿಂದ ಅಮೆರಿಕಕ್ಕೆ ಹೊರದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರುವ ಆದೇಶಕ್ಕೆ ಸಹಿ ಹಾಕುತ್ತೇನೆ ಎಂದು ತಿಳಿಸಿದ್ದಾರೆ.

ಈ ಆದೇಶ ಯಾವ ದಿನದಿಂದ ಜಾರಿಗೆ ಬರಲಿದೆ ಮತ್ತು ಎಲ್ಲಿಯವರೆಗೆ ಇರುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ ಇದರಿಂದ ಅಮೆರಿಕಾದ ಕಾನೂನಾತ್ಮಕ ಮತ್ತು ರಾಜಕೀಯ ವಿಷಯಗಳಿಗೆ ಹಿನ್ನಡೆಯಾಗಲಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.