ನೀತಿ ಸಂಹಿತೆ ಮುಕ್ತಾಯದವರೆಗೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ.

ಬೆಂಗಳೂರು,ಮಾರ್ಚ್,30,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಫಿಕ್ಸ್ ಆಗಿದ್ದು ನಿನ್ನೆಯಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಮುಗಿಯುವವರೆಗೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಆದೇಶಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀತಿ ಸಂಹಿತೆ ಮುಕ್ತಾಯದವರೆಗೆ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು.  ಏಪ್ರಿಲ್ 10ರೊಳಗೆ ಠಾಣೆಗೆ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳನ್ನ ಒಪ್ಪಿಸಬೇಕು. ಮೇ 16ರ ಬಳಿಕ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನ  ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮೆ10 ರಂದು ನಡೆಯಲಿದ್ದು ಮೇ13ರಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Key words: Restriction – use – licensed – weapon – Bangalore- till -code of Conduct.