ಬೆಂಗಳೂರು-ಮೈಸೂರು ನಡುವಿನ ಪ್ರಯಾಣಕ್ಕೆ ನಿರ್ಬಂಧ ವಿಚಾರ: ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ…

ಮೈಸೂರು,ಜು,11,2020(www.justkannada.in): ಬೆಂಗಳೂರು ಟ್ರಾವೆಲ್‌ ಹಿಸ್ಟರಿ ಇದ್ದವರಿಗೆ ಕೊರೋನಾ ಸೋಂಕು ಬರುತ್ತಿರುವುದು ನಿಜ. ಆದರೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣಕ್ಕೆ ನಿರ್ಬಂಧ ಸದ್ಯಕ್ಕಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರಿನಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿಯೂ ಚರ್ಚೆ ಮಾಡಿದ್ದೇವೆ. ಅಂತರ ರಾಜ್ಯ ಹಾಗೂ ಜಿಲ್ಲೆಯವರಿಗೆ ನಿರ್ಭಂದ ವಿಧಿಸುವ ಕುರಿತು ಚರ್ಚೆ ಮಾಡುತ್ತಿದ್ದೇವೆ. ಕೆಲವೆ ದಿನಗಳ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತೆ‌ ಎಂದರು.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಸಚಿವರು, ಶಾಸಕರು ಕಟಿಬದ್ದರಾಗಿದ್ದಾರೆ. ನನಗೆ 8 ವಲಯಗಳ ಉಸ್ತುವಾರಿ ನೀಡಿದ್ದಾರೆ. ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಬೆಂಗಳೂರು ಟ್ರಾವೆಲ್‌ ಹಿಸ್ಟರಿ ಇದ್ದವರಿಗೆ ಕೊರೊನಾ ಸೋಂಕು ಬರುತ್ತಿರುವುದು ನಿಜ. ಹೀಗಾಗಿ ಬೆಂಗಳೂರು-ಮೈಸೂರು ನಡುವೆ ಪ್ರಯಾಣ ನಿರ್ಬಂಧ ಮಾಡಬೇಕು ಎಂಬ ವಿಚಾರ ಚರ್ಚೆಗೆ ಬಂದಿದೆ. ಆದರೆ ಪ್ರಯಾಣ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣಕ್ಕೆ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.restrictions-travel-between-bangalore-mysore-minister-st-somashekhar

ಪ್ರಾರಂಭದಲ್ಲಿ ಹೊರಗಿನಿಂದ ಬೆಂಗಳೂರಿಗೆ ಬರಬೇಡಿ ಎಂಬ‌ ಸನ್ನಿವೇಶ ಇತ್ತು. ಈಗ ಬೆಂಗಳೂರಿನಿಂದ ಬೇರೆ ಕಡೆ ಬರಬೇಡಿ ಎಂಬ ಸ್ಥಿತಿ ಎದುರಾಗಿದೆ ಎಂದು ಸಚಿವ ಸೋಮಶೇಖರ್  ಆತಂಕ ವ್ಯಕ್ತಪಡಿಸಿದರು.

Key words: Restrictions – travel-between -Bangalore – Mysore-Minister- ST Somashekhar