ಸಿದ್ಧರಾಮಯ್ಯ ಮತ್ತು ಹೆಚ್.ಡಿಕೆಗೆ ಟಾಂಗ್: ಲೋಕಸಭೆ ಚುನಾವಣೆ ಫಲಿತಾಂಶ ಪುನರಾವರ್ತನೆಯಾಗಲಿದೆ- ಸಿಎಂ ಬಿಎಸ್ ವೈ ವಿಶ್ವಾಸ

ಬೆಂಗಳೂರು,ನ,19,2019(www.justkannada.in): ಬಿಜೆಪಿ ವಿರುದ್ದ ಕಿಡಿಕಾರುತ್ತಿರುವ ಮಾಜಿ ಸಿಎಂಗಳಾದ ಸಿದ್ಧರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯ ಇಬ್ಬರು ನಾಯಕರ ಕಥೆ ಏನಾಯ್ತು. ಇಬ್ಬರು ನಾಯಕರು 28 ಕ್ಷೇತ್ರಗಳಲ್ಲಿ ತಲಾ ಒಂದೊಂದು ಕ್ಷೇತ್ರವನ್ನಮಾತ್ರ  ಗೆದ್ದರು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದವು. ಆದರೆ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಿದವು. ಈಗ ಉಪಚುನಾವಣೆಯಲ್ಲೂ ಲೋಕಸಭಾ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾಗೆಯೇ ಮೂರುವರೆ ವರ್ಷ ಸರ್ಕಾರಕ್ಕೆ ಏನು ಆಗಲ್ಲ.  ಸರ್ಕಾರ ಆರಾಮವಾಗಿ ಇರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: results – Loksabha- elections – repeated-CM BS yeddyurappa