ಮಾರ್ಚ್17ಕ್ಕೆ ನಾನು ರಾಜಕೀಯದಿಂದ ನಿವೃತ್ತಿ : ಯಾವುದೇ ಪಕ್ಷದ ಪರ ಪ್ರಚಾರ  ಮಾಡಲ್ಲ- ಸಂಸದ ವಿ‌.ಶ್ರೀನಿವಾಸ್ ಪ್ರಸಾದ್

ಮೈಸೂರು,ನವೆಂಬರ್,11,2023(www.justkannada.in):  ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ಮಾರ್ಚ್ 17ರ ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಸಂಸದ ವಿ‌.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷ. ಅಂದೇ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ. ಮುಂದೆ ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ. ರಾಜಕೀಯದ ಎಲ್ಲಾ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುತ್ತೇನೆ ಎಂದರು.

ಬಿಜೆಪಿ ಹೈಕಮಾಂಡ್ ಕೊನೆಗೆ ಗಜಪ್ರಸವ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಬಿಜೆಪಿ ಹೈಕಮಾಂಡ್ ಕೊನೆಗೆ ಗಜಪ್ರಸವ ಮಾಡಿದೆ. ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಮಾಡಿ ಗಜೇಂದ್ರ ಮೋಕ್ಷ ಮಾಡಲಿ. ವಿಜಯೇಂದ್ರ ಮುಂದೆ ಬೆಟ್ಟದಂತಹ ಸವಾಲಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿರುಸಿನಲ್ಲಿ ಓಡುತ್ತಿದೆ. ಅದನ್ನೆಲ್ಲ ತಡೆಯಲು ಪಕ್ಷ ಸಂಘಟಿಸ ಬೇಕಿದೆ. ಇಲ್ಲಿ ಕುಟುಂಬ ರಾಜಕಾರಣ ಪ್ರಶ್ನೆ ಇಲ್ಲ. ದೇವೆಗೌಡರು, ಸಿದ್ದರಾಮಯ್ಯ ಎಲ್ಲರೂ ಕುಟುಂಬ ರಾಜಕಾರಣ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರು ರಾಜಕಾರಣ ಮಾಡುತ್ತಾರೆ. ಆದರೆ ಎಲ್ಲರೂ ಒಳ್ಳೆಯ ರಾಜಕಾರಣ ಮಾಡಲಿ. ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.

Key words: retire – politics – March 17- not- campaign – MP- V. Srinivas Prasad