ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ ಬಳಿಕ ಡಿ.26ರಂದು ಮೈಸೂರಿಗೆ…!

ಮೈಸೂರು,ಡಿಸೆಂಬರ್,19,2020(www.justkannada.in) : ಸಾಮಾಜಿಕ ನ್ಯಾಯ ವೇದಿಕೆ ವತಿಯಿಂದ ಡಿಸೆಂಬರ್.26ರಂದು ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ‘ಬೆಂಕಿಯ ಚೆಂಡು ಕುಯಿಲಿ’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಿದೆ.Retired-IPS Officer-Annamalai-BJP-join-Mysore-December 26

ಅಂದು ಸಂಜೆ 4.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಣ್ಣಾ ಮಲೈ ಪುಸ್ತಕ ಬಿಡುಗಡೆ ಮಾಡಲಿದ್ದು, ಕೃತಿ ಕುರಿತು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ ಮಾತನಾಡಲಿದ್ದಾರೆ. ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಅಣ್ಣಾಮಲೈ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಪುಸ್ತಕ ಬಿಡುಗಡೆ ಸಮಾರಂಭದ ಮೂಲಕ ಅಣ್ಣಮಲೈ ಸಾರ್ವಜನಿಕ ವೇದಿಕೆಗೆ ರಾಜಕಾರಣಿಯಾಗಿ ಎಂಟ್ರಿ ಪಡೆಯುತ್ತಿರುವುದು ಪುಸ್ತಕ ಬಿಡುಗಡೆ ಸಮಾರಂಭದ ಕುತೂಹಲ ಹೆಚ್ಚಿಸಿದೆ.

 

Retired-IPS Officer-Annamalai-BJP-join-Mysore-December 26 

ಮಾಜಿ ಸಚಿವ ಎ.ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಗ್ರಂಥಕರ್ಥ ಹಿರಿಯ ವಕೀಲ ಒ.ಶಾಮಭಟ್ ಸಮಾರಂಭದಲ್ಲಿ ಉಪಸ್ಥಿತರಿರುವರು.

key words : Retired-IPS Officer-Annamalai-BJP-join-Mysore-December 26