ನಾಳೆ ಎಎಪಿಗೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರ್ಪಡೆ ?

ಬೆಂಗಳೂರು, ಏಪ್ರಿಲ್ 03, 2022 (www.justkannada.in): ನಗರ ಪೊಲೀಸ್ ಆಯುಕ್ತರಾಗಿ ಸ್ವಯಂ ನಿವೃತ್ತಿ ಪಡೆದಿದ್ದಂತ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಸೇರಲಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.

ನಾಳೆ ಮಧ್ಯಾಹ್ನ ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸ್ಥಾನದಿಂದ ವರ್ಗಾವಣೆಗೊಂಡ ಬಳಿಕ, ಅವರು ಸರ್ಕಾರಕ್ಕೆ ಸ್ವಯಂ ನಿವೃತ್ತಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಗೆ ರಾಜ್ಯ ಸರ್ಕಾರ ನಿನ್ನೆ ಒಪ್ಪಿಗೆ ಸೂಚಿಸಿತ್ತು.

ನಾಳೆ ದೆಹಲಿಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಭೇಟಿಯಾಗಲಿದ್ದಾರೆ. ಈ ಬಳಿಕ ಸಿಎಂ ಅರವಿಂದ್ ಕೇಂಜ್ರಿವಾಲ್ ಅವರನ್ನು ಭೇಟಿಯಾಗಲಿದ್ದಾರೆ. ಈ ಬಳಿಕ ಅಧಿಕೃತವಾಗಿಭಾಸ್ಕರ್ ರಾವ್ ಎಎಪಿ ಪಕ್ಷವನ್ನು ಸೇರಲಿದ್ದಾರೆ ಎನ್ನಲಾಗುತ್ತಿದೆ.