Monday, October 12, 2026

Dasara Wishes

Happy Dasara
Home Front Page ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ನೇಮಕ.

ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ನೇಮಕ.

ಬೆಂಗಳೂರು,ಜೂನ್,14,2022(www.justkannada.in): ಕರ್ನಾಟಕ ಲೋಕಾಯುಕ್ತ  ನ್ಯಾಯಮೂರ್ತಿಯಾಗಿ ಹೈಕೋರ್ಟ್  ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನ ನೇಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್  ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್  ಪ್ರಸ್ತುತ ಉಪ ಲೋಕಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ  ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅಂಕಿತ ಹಾಕಿದ್ದಾರೆ.ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ನೇಮಕ bs patil

ಇನ್ನು ಭೀಮನಗೌಡ ಸಂಗನಗೌಡ ಪಾಟೀಲ್  ಲೋಕಾಯುಕ್ತ ನ್ಯಾಯಮೂರ್ತಿಯಾಗಿ ನಾಳೆ  ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಬೆಳಿಗ್ಗೆ 9.45ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Key words: Retired Justice -BS Patil- appointed- Karnataka -Lokayukta