ನನಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯಿರಿ-ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ ಯಡಿಯೂರಪ್ಪ

ಬೆಂಗಳೂರು,ಆಗಸ್ಟ್,8,2021(www.justkannada.in):  ನನಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನದ ಆದೇಶವನ್ನ ಹಿಂಪಡೆಯಿರಿ. ಮಾಜಿ ಸಿಎಂ ಗೆ ಕೊಡುವ ಸೌಲಭ್ಯ ಸಾಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಬಿಎಸ್ ಯಡಿಯೂರಪ್ಪ, ‘ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ, ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು’ ಎಂದು ಕೋರಿದ್ದಾರೆ

ನಿನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರು. ಅವರಿಗೆ ಸಚಿವರಿಗೆ ಇರುವಂತೆ ಭದ್ರತೆ, ಎಸ್ಕಾರ್ಟ್ ವಾಹನಗಳ ಸೌಲಭ್ಯವನ್ನು ನೀಡಬೇಕು ಎಂದು ಸಿಎಂ ಬೊಮ್ಮಾಯಿ ಶನಿವಾರ ಆದೇಶಿಸಿದ್ದರು.  ಆದರೆ ಇದೀಗ ಸ್ವತಃ ಯಡಿಯೂರಪ್ಪ ಅವರೇ ಈ ಆದೇಶವನ್ನು ಹಿಂಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದಾರೆ.

Key words: Retrieve – cabinet- grade –status-former CM-BS Yeddyurappa, -CM Basavaraj Bommai