Sunday, August 23, 2026

BDA Apartments

Home Front Page ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ ಸೇಡಿನ ರಾಜಕಾರಣ: ಜನರೇ ಉತ್ತರ ಕೊಡ್ತಾರೆ- ಸಚಿವ ಕೃಷ್ಣಭೈರೇಗೌಡ.

ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ ಸೇಡಿನ ರಾಜಕಾರಣ: ಜನರೇ ಉತ್ತರ ಕೊಡ್ತಾರೆ- ಸಚಿವ ಕೃಷ್ಣಭೈರೇಗೌಡ.

ಚಿತ್ರದುರ್ಗ,ಅಕ್ಟೋಬರ್,10,2023(www.justkannada.in): ಜೆಡಿಎಸ್ ಮತ್ತು ಬಿಜೆಪಿಯವರು ಒಂದಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸುವುದಾಗಿ ಹೇಳುತ್ತಿದ್ದಾರೆ. ಸೇಡಿನ ರಾಜಕಾರಣ ಮುಂದುವರಿದರೆ ಜನರೇ ಉತ್ತರ ನೀಡುತ್ತಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟಾಂಗ್ ನೀಡಿದರು.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ. ಹೆಚ್.ಡಿಕೆ ಹೇಳಿಕೆಗೆ ಈಗಾಗಲೇ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ‌ ಜೊತೆ ಜೆಡಿಎಸ್ ಕೈಜೋಡಿಸಿದೆ. ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ, ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ ಎಂದರು.

ಯಾವುದೇ ಸರ್ಕಾರ ಮಾಡದ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕ್ರಾಂತಿಕಾರಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಸರ್ಕಾರ ಬಡವರಿಗೆ ಸಹಾಯ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ನಾಯಕರ ಕಣ್ಣು ಕುಕ್ಕುತ್ತಿದೆ. ನಮ್ಮ ಸರ್ಕಾರ‌ ಬಡವರು, ರೈತರು, ದುಡಿಯುವ ವರ್ಗದ ಪರವಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: Revenge- politics – JDS – BJP- Minister- Krishnabhair Gowda.