ಕಂದಾಯ ಇಲಾಖೆ ನಿವೃತ್ತ ನೌಕರರಿಂದ ಅರ್ಜಿ ಆಹ್ವಾನಿಸಿದ ಬಿಡಿಎ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಅನುಭವಿ ಸಿಬ್ಬಂದಿ / ಅಧಿಕಾರಿಗಳ ಅವಶ್ಯಕತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿರಸ್ತೇದಾರರು/ಕಂದಾಯ ನಿರೀಕ್ಷಕರು/ವಿಷಯ ನಿರ್ವಾಹಕರುಗಳನ್ನು (ಪ್ರ.ದ.ಸ. ದರ್ಜೆ) ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಪ್ರಾಧಿಕಾರದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಕೆಲಸ ಮಾಡಲು ಇಚ್ಛಿಸುವ ಆಸಕ್ತಿವುಳ್ಳವರು ದಿನಾಂಕ ೧೫.೦೧.೨೦೨೧ರೊಳಗೆ ತಮ್ಮ ಸ್ವವಿವರದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಪ್ರಾಧಿಕಾರದ ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು-೫೬೦ ೦೨೦ ಇಲ್ಲಿಗೆ ನೋಂದಣಿ ಅಂಚೆ ಮುಖಾಂತರ ಕಳುಹಿಸಬಹುದು.

ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ, ಮುಂದಿನ ಕ್ರಮವಹಿಸಲಾಗುವುದು. ಸರ್ಕಾರವು ಕಾಲಕಾಲಕ್ಕೆ ಹೊರಡಿಸಿರುವ ನಿಯಮಗಳ ಪ್ರಕಾರ ನೇಮಕಾತಿ ಮಾಡಿಕೊಳ್ಳಲಾಗುವುದು.