ರೆವಿನ್ಯೂ ಬಡಾವಣೆಗಳನ್ನು ಅಕ್ರಮ-ಸಕ್ರಮ ಯೋಜನೆಯಡಿ ಸೇರ್ಪಡಿಸುವಂತೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಮನವಿ 

ಮೈಸೂರು,ಅಕ್ಟೋಬರ್,14,2020(www.justkannada.in) :  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರೆವಿನ್ಯೂ ಬಡಾವಣೆಗಳನ್ನು ಅಕ್ರಮ-ಸಕ್ರಮ ಯೋಜನೆಯಡಿ ಸೇರ್ಪಡಿಸಿಕೊಂಡು, ಕಂದಾಯ ನಿಗದಿಪಡಿಸಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್(ಬೈರತಿ) ಅವರನ್ನು ಸಂಸದ ಪ್ರತಾಪ್ ಸಿಂಹ ಮನವಿಮಾಡಿದ್ದಾರೆ.jk-logo-justkannada-logoಬುಧವಾರ ಸಚಿವ ಸಚಿವ ಬಿ.ಎ.ಬಸವರಾಜ್ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ ರೆವಿನ್ಯೂ ಬಡಾವಣೆಗಳ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 77 ರೆವಿನ್ಯೂ ಬಡಾವಣೆಗಳು ನಿರ್ಮಾಣಗೊಂಡು ಸಾಕಷ್ಟು ಅಭಿವೃದ್ಧಿ ಹೊಂದಿದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ.  ಆದರೆ, ಸದರಿ ಪ್ರದೇಶದ ಬಡಾವಣೆಗಳು ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಚರಂಡಿ ಹಾಗೂ ಇತರೆ ಸೌಕರ್ಯಗಳಿಂದ ಸಾರ್ವಜನಿಕರು ವಂಚಿತರಾಗಿದ್ದಾರೆ ಎಂದು ಮಾಹಿತಿ ನೀಡಿದರು.ಪಾಲಿಕೆ ವ್ಯಾಪ್ತಿಗೆ ಒಳಪಡುವ ರೆವಿನ್ಯೂ ಬಡಾವಣೆಗಳನ್ನು ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಿ, ಖಾತೆ-ಕಂದಾಯ ಪಾವತಿಸಲು ಅವಕಾಶ ಮಾಡಿಕೊಟ್ಟರೆ ಪಾಲಿಕೆಯ ಆದಾಯವು ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ಅದಲ್ಲದೇ, ಪ್ರಧಾನ ಮಂತ್ರಿಗಳು 2022ರೊಳಗೆ ಪ್ರತಿಯೊಬ್ಬರಿಗೂ ಸೂರನ್ನು ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸವಲತ್ತುಗಳನ್ನೂ ಪಡೆದುಕೊಳ್ಳಬಹುದಾಗಿದೆ.  ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಸುಮಾರು 77 ರೆವಿನ್ಯೂ ಬಡಾವಣೆಗಳಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸೇರಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

key words : Revenue-projects-under-illegal-scheme-Minister- included-Pratap-lion-appeals-MP