ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣ: ನಾಳೆ ಶಿವಮೊಗ್ಗಕ್ಕೆ ಬಿಜೆಪಿ ನಿಯೋಗ ಭೇಟಿ.

ಶಿವಮೊಗ್ಗ,ಅಕ್ಟೋಬರ್,3,2023(www.justkannada.in): ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಗಲಾಟೆ ಪ್ರಕರಣ  ಹಿನ್ನೆಲೆ ನಾಳೆ ಶಿವಮೊಗ್ಗ ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡುವ ಬಿಜೆಪಿ ನಿಯೋಗ, ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ. ಬಳಿಕ 11.15ಕ್ಕೆ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿ, ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.

Key words: Riot case -Eid Milad -BJP delegation – visit Shimoga- tomorrow