ವಾಹನ ಸವಾರರಿಗೆ ಶಾಕ್: ಪೆಟ್ರೋಲ್,  ಡೀಸೆಲ್ ದರದಲ್ಲಿ ಏರಿಕೆ…

ನವದೆಹಲಿ,ಜು,5,2019(www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ  ಸೆಸ್ ಹೆಚ್ಚಳ ಮಾಡಿದ ಹಿನ್ನೆಲೆ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 1 ರೂಪಾಯಿ ಸೆಸ್ ಏರಿಕೆ ಮಾಡಲಾಗಿತ್ತು. ಸೆಸ್ ಏರಿಕೆ ಬೆನ್ನಲ್ಲೆ ಇದೀಗ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಗೆ 2.50 ರೂ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆ 2.30 ರೂ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಮೊದಲೇ ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

Key words:  rise – cess-Petrol- diesel -prices up