ಅಪಾಯಕಾರಿ ಅಂಶ ಪತ್ತೆ ಹಿನ್ನೆಲೆ:  ಮೈಸೂರಿನಲ್ಲಿ 25 ಕೋಟಿ ರೂ. ಮೌಲ್ಯದ ಕಿಂಗ್​ ಫಿಶರ್ ಬಿಯರ್ ಜಪ್ತಿ..

ಮೈಸೂರು,ಆಗಸ್ಟ್,16,2023(www.justkannada.in): ಮೈಸೂರಿನಲ್ಲಿ ಕಿಂಗ್​ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ 25 ಕೋಟಿ ರೂ. ಮೌಲ್ಯದ ಕಿಂಗ್​ ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮೈಸೂರು ಗ್ರಾ. ಅಬಕಾರಿ ಉಪ ಆಯುಕ್ತ ಎ.ರವಿಶಂಕರ್, ಕಿಂಗ್​ಫಿಶರ್ ಬಿಯರ್​ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದೆ. ನಂಜನಗೂಡಿನ ಘಟಕದಲ್ಲಿ‌ ತಯಾರಿಸಲಾಗಿದ್ದ ಬಿಯರ್ ​ನಲ್ಲಿ ಸ್ಟ್ರಾಂಗ್​ ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಒಟ್ಟು‌ 78,678 ಬಿಯರ್ ಬಾಕ್ಸ್​ ಗಳನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದರು.

ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆ ಎಫ್ ​ಐಆರ್ ದಾಖಲಾಗಿದೆ. ರಿಟೈಲ್​ ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ. ಇನ್​ ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ರಿಪೋರ್ಟ್ ಮೇಲೆ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

Key words: Risk factor- detection-25 crores – Mysore- Seizure – King Fisher- beer