ಮಾತುಕತೆ ಮೂಲಕ ನದಿ ವಿವಾದ ಬಗೆಹರಿಸಿಕೊಳ್ಳಬೇಕು: ದಕ್ಷಿಣ ಭಾರತ ರಾಜ್ಯಗಳ ಮಂಡಳಿ ಸಭೆಯಲ್ಲಿಅಮಿತ್ ಶಾ ಸಲಹೆ

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): ಅಂತಾರಾಜ್ಯ ನದಿ ವಿವಾದಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದಕ್ಷಿಣ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ತಿರುವನಂತಪುರದಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಜಲವಿವಾದ ಸಂಬಂಧ ಜಂಟಿಯಾಗಿ ಒಂದು ಪರಿಹಾರ ಸೂತ್ರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಕೇರಳ ಸಿಎಂ ಪಿಣರಾಯಿ ವಿಜಯನ್‌, ತಮಿಳುನಾಡಿನ ಎಂ.ಕೆ.ಸ್ಟಾಲಿನ್‌ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಭಾಗಿಯಾಗಿದ್ದರು.

ಕಾವೇರಿ ವಿಚಾರದಲ್ಲಿ ಕರ್ನಾಟಕ-ತಮಿಳುನಾಡು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ನಡುವೆ ಕೃಷ್ಣಾ ನದಿ ನೀರಿನ ಸಮಸ್ಯೆ ಇದೆ.

ಈ ಸಭೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ತಿಕ್ಕಾಟ ಹಾಗೂ ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳಲು ವೇದಿಕೆಯಾಗಿದೆ ಎಂದು ಶಾ ತಿಳಿಸಿದ್ದಾರೆ.