ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಗೆ ED ಸಮನ್ಸ್

ಮುಂಬೈ,ಸೆಪ್ಟಂಬರ್,16,2025 (www.justkannada.in): ಆನ್ ಲೈನ್ ಬೆಟ್ಟಿಂಗ್ ಆ್ಯಪ್   ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಮತ್ತು ಯುವರಾಜ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ರಾಬಿನ್ ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರೆ ಸೆಪ್ಟಂಬರ್ 23 ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ  ಯುವರಾಜ್ ಸಿಂಗ್ ಅವರಿಗೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

1 ಎಕ್ಸ್ ಬೆಟ್ ಎಂಬ ಪ್ಲಾಟ್ ಫಾರ್ಮ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂದಿನ ವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ರಾಬಿನ್ ಉತ್ತಪ್ಪ ಯುವರಾಜ್ ಸಿಂಗ್ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Key words: ED, summons, former cricketers, Robin Uthappa, Yuvraj Singh