Tuesday, September 22, 2026

BDA Apartments

ಕೆಎಸ್‌ಸಿಎ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಸ್ಪರ್ಧೆ? BDA JK_Adv BDA Adv
Home Front Page ಕೆಎಸ್‌ಸಿಎ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಸ್ಪರ್ಧೆ?

ಕೆಎಸ್‌ಸಿಎ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಸ್ಪರ್ಧೆ?

ಬೆಂಗಳೂರು, ಸೆಪ್ಟೆಂಬರ್ 27, 2019 (www.justkannada.in): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪದಾಧಿಕಾರಿಗಳ ಸ್ಥಾನದ ಆಕಾಂಕ್ಷಿಗಳ ವಲಯದಲ್ಲಿ ತುರುಸಿನ ಚಟುವಟಿಕೆ ಗರಿಗೆದರಿದೆ.

ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 1983ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಬಿನ್ನಿ ಇದ್ದರು.

ಕರ್ನಾಟಕದ ಕ್ರಿಕೆಟ್‌ಗೂ ಉತ್ತಮ ಕಾಣಿಕೆ ನೀಡಿದ್ದಾರೆ. ಆದ್ದರಿಂದ ಅವರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.