‘ಬೇಗ್’ ನಡೆ ಬಿಜೆಪಿಯ ಕಡೆ…..?  

ಬೆಂಗಳೂರು,ಜು,9,2019(www.justkannada.in):  ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ ಇದೀಗ 14ಕ್ಕೆ ಏರಿಕೆಯಾಗಿದೆ. ಹೌದು ಇಂದು ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ.

ಖುದ್ದು ಸ್ಪೀಕರ್ ಕಚೇರಿಗೆ ಆಗಮಿಸಿದ  ರೋಷನ್ ಬೇಗ್ ಸ್ಪೀಕರ್ ರಮೇಶ್ ಕುಮಾರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಿದ್ದು,  ಸ್ಪೀಕರ್ ರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಇತ್ತೀಚೆಗೆ ಮಾಜಿ ಸಚಿವ ರೋಷನ್ ಬೇಗ್  ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಅವರ ವಿರುದ್ದ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿದ್ದರು. ಈ ನಡುವೆ ಐಎಂಎ ಪ್ರಕರಣದಲ್ಲೂ ಇವರ ಹೆಸರು ಕೇಳಿ ಬಂದಿತ್ತು. ಜತೆಗೆ ರೋಷನ್ ಬೇಗ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಇದೀಗ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

Key words: roshan baig-Resignation-MLA-Join-BJP