ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಸಸ್ಪೆಂಡ್, ಓರ್ವ ಅಧಿಕಾರಿ ಎತ್ತಂಗಡಿ.

ಬೆಂಗಳೂರು ,ನವೆಂಬರ್,10,2025 (www.justkannada.in): ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ  ಅಮಾನತು ಮತ್ತು ಓರ್ವ ಅಧಿಕಾರಿಯನ್ನ ವರ್ಗಾವಣೆ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ಹಾಗೂ ಉಪಾಧೀಕ್ಷಕ ಅಶೋಕ್ ಬಜಂತ್ರಿ ಅವರನ್ನ ಅಮಾನತು ಮಾಡಲಾಗಿದ್ದು ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ಮಾಹಿತಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ. 5 ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

Key words:  Royal hospitality, prisoners , jail,  Two suspended