ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಮುನಿರತ್ನ…

ಬೆಂಗಳೂರು,ಅಕ್ಟೋಬರ್,14,2020(www.justkannada.in):  ರಾಜರಾಜೇಶ್ವರಿನಗರ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಇಂದು ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.jk-logo-justkannada-logo

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು ಇಂದು ನಾಮಪತ್ರ ಸಲ್ಲಿಕೆಗೆ ಒಳ್ಳೆಯದಿನ. ಇಂದು ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು.rr-nagar-bjp-candidate-muniratha-adichunchanagiri-math-received-blessings

ಆರ್.ಆರ್ ನಗರ ಉಪಚುನಾವಣಾ ಬಿಜೆಪಿ ಟಿಕೆಟ್ ಗಾಗಿ ತುಳಸಿಮುನಿರಾಜುಗೌಡ ಮತ್ತು ಮುನಿರತ್ನ ಅವರ ನಡುವೆ ಪೈಪೋಟಿ ನಡೆದಿತ್ತು. ಈ ಮಧ್ಯೆ ತುಳಸಿ ಮುನಿರಾಜು ಅವರು ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನ  ನಿನ್ನೆ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ಬೆನ್ನಲ್ಲೆ ಮುನಿರತ್ನ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ್ದು ಇಂದು ಆರ್.ಆರ್ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಸಲಿದ್ದಾರೆ.

Key words: RR Nagar- BJP candidate – Muniratha- Adichunchanagiri math- received – blessings